ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟು ಚೀತಾಗಳು ಬಂದವು, 16 ಕೋಟಿ ಉದ್ಯೋಗ ಏಕಿಲ್ಲ: ಪಿಎಂ ಮೋದಿಗೆ ರಾಹುಲ್ ಪ್ರಶ್ನೆ

Last Updated 17 ಸೆಪ್ಟೆಂಬರ್ 2022, 13:36 IST
ಅಕ್ಷರ ಗಾತ್ರ

ನವದೆಹಲಿ: ಚೀತಾ ಮರು ಪರಿಚಯ ಯೋಜನೆಯಡಿ ನಮೀಬಿಯಯಾದಿಂದ ಭಾರತಕ್ಕೆ 8 ಚೀತಾಗಳನ್ನುತರಿಸಿಕೊಳ್ಳಲಾಗಿದೆ. ಇವುಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, 'ಎಂಟು ಚೀತಾಗಳು ಬಂದವು. ಈಗ ಹೇಳಿ, 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಏಕೆ ಬಂದಿಲ್ಲ?' ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಚೀತಾ ಯೋಜನೆಯುರಾಷ್ಟ್ರೀಯ ಸಮಸ್ಯೆಗಳು ಮತ್ತು ಕಾಂಗ್ರೆಸ್‌ ನಡೆಸುತ್ತಿರುವ 'ಭಾರತ್ ಜೋಡೊ ಯಾತ್ರೆ' ಕಡೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT