ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್ ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಅಗ್ನಿ ಅವಘಡ: 8 ಮಂದಿ ಸಾವು

Last Updated 13 ಸೆಪ್ಟೆಂಬರ್ 2022, 4:42 IST
ಅಕ್ಷರ ಗಾತ್ರ

ಹೈದರಾಬಾದ್:ಇಲ್ಲಿನ ಎಲೆಕ್ಟ್ರಿಕ್ ಬೈಕ್‌ ಶೋ ರೂಂ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋ ರೂಂ ಮೇಲಿನ ಮಹಡಿಯಲ್ಲಿರುವ ಲಾಡ್ಜ್‌ಗೂ ಬೆಂಕಿ ವ್ಯಾಪಿಸಿದೆ. ಹಲವು ಎಲೆಕ್ಟ್ರಿಕ್ ಸ್ಕೂಟರ್‌ಗಳು ಸುಟ್ಟು ಹೋಗಿವೆ. ಗಾಯಾಳುಗಳನ್ನು ನಗರದ ಗಾಂಧಿ ಮತ್ತು ಯಶೋಧಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಶ್ರಮಿಸುತ್ತಿದ್ದು, ದುರಂತಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕಟ್ಟಡದ ನೆಲ ಮಹಡಿಯಲ್ಲಿರುವ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಮೇಲಿನ ಮಹಡಿಯಲ್ಲಿರುವ ರೂಬಿ ಲಾಡ್ಜ್‌ನಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಶಾಮಕ ಸಿಬ್ಬಂದಿ 9 ಜನರನ್ನು ರಕ್ಷಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಲಾಡ್ಜ್‌ನಲ್ಲಿದ್ದವರು ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಕಿಟಕಿಗಳ ಮೂಲಕ ಹೊರಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಪಶುಸಂಗೋಪನೆ ಸಚಿವ ಟಿ. ಶ್ರೀನಿವಾಸ ಯಾದವ್‌ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT