ಬಾಲಕಿ ಮೇಲೆ 8 ಮಂದಿಯಿಂದ ಲೈಂಗಿಕ ದೌರ್ಜನ್ಯ, ವಿಡಿಯೊ ಸೋರಿಕೆ: ಸಿಗದ ಆರೋಪಿಗಳು

ಜೈಪುರ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಮೂಲಗಳು ಹೇಳಿವೆ.
ಅತ್ಯಾಚಾರ ಎಸಗಿದ 8 ಮಂದಿ ಆರೋಪಿಗಳು ಬಾಲಕಿಯಿಂದ ಹಣ ಸುಲಿಗೆ ಮಾಡಿದ್ದಾರೆ ಮತ್ತು ಆಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್ 29 ರಂದು ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.