ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಕರ ಅಪಘಾತ: ಶಬರಿಮಲೆಯಿಂದ ಹಿಂತಿರುಗುತ್ತಿದ್ದ 8 ಯಾತ್ರಿಗಳ ದುರ್ಮರಣ

Last Updated 24 ಡಿಸೆಂಬರ್ 2022, 4:43 IST
ಅಕ್ಷರ ಗಾತ್ರ

ತೇಣಿ: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೇಣಿ ಜಿಲ್ಲಾಧಿಕಾರಿ ಕೆ ವಿ ಮುರಳೀಧರನ್ ತಿಳಿಸಿದ್ದಾರೆ.

ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಘಟನೆಯಲ್ಲಿ ಏಳು ಮಂದಿ ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಂಟು ಮಂದಿ ಮೃತರಲ್ಲಿ ಒಬ್ಬ ಬಾಲಕನೂ ಸೇರಿದ್ದು, ಇವರೆಲ್ಲರೂ ತೇಣಿಯ ಆಂಡಿಪಟ್ಟಿ ನಿವಾಸಿಗಳು. ಶಬರಿಮಲೆಗೆ ಯಾತ್ರೆಗೆ ತೆರಳಿದ್ದ ಎಲ್ಲರೂ ಹುಟ್ಟೂರಿಗೆ ಹಿಂತಿರುಗುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT