ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಕೋವಿಡ್‌ ತೀವ್ರ ಏರಿಕೆ

Last Updated 3 ಏಪ್ರಿಲ್ 2021, 10:09 IST
ಅಕ್ಷರ ಗಾತ್ರ

ನವದೆಹಲಿ: ‘ಎಂಟು ರಾಜ್ಯಗಳಲ್ಲಿ ದೈನಂದಿನ ಕೋವಿಡ್‌ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಶನಿವಾರ ವರದಿಯಾದ ಹೊಸ ಪ್ರಕರಣಗಳ ಪೈಕಿ ಈ 8 ರಾಜ್ಯಗಳಲ್ಲಿ ಶೇ 81.42ರಷ್ಟು ಪ್ರಕರಣಗಳು ದಾಖಲಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರ, ಕರ್ನಾಟಕ, ಛತ್ತೀಸಗಡ, ದೆಹಲಿ, ತಮಿಳುನಾಡು, ಉತ್ತರ ಪ್ರದೇಶ, ಪಂಜಾಬ್‌ ಮತ್ತು ಮಧ್ಯಪ್ರದೇಶದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಪುಣೆ, ಮುಂಬೈ, ನಾಗ‍ಪುರ, ಠಾಣೆ, ನಾಸಿಕ್‌, ಬೆಂಗಳೂರು ನಗರ, ಔರಂಗಾಬಾದ್‌, ದೆಹಲಿ, ಅಹ್ಮದ್‌ನಗರ ಮತ್ತು ನಾಂದೇಡ್‌ ಜಿಲ್ಲೆಗಳು ಒಟ್ಟು ಪ್ರಕರಣದ ಶೇ 50 ರಷ್ಟು ಭಾಗವನ್ನು ಹೊಂದಿದೆ.

ದಿನದಲ್ಲಿ 44,213 ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಈ ಮೂಲಕ ದೇಶದ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 6,58,909 ಏರಿಕೆಯಾಗಿದೆ.

ಮಹಾರಾಷ್ಟ್ರ, ಕರ್ನಾಟಕ, ಛತ್ತೀಸಗಡ ಕೇರಳ ಮತ್ತು ಪಂಜಾಬ್‌ ದೇಶದ ಒಟ್ಟು ಸಕ್ರಿಯ ಪ್ರಕರಣದ ಶೇಕಡ 77.3 ಪಾಲನ್ನು ಹೊಂದಿವೆ.

‘ದೇಶದಲ್ಲಿ ಶನಿವಾರ 89,129 ಹೊಸ ಪ್ರಕರಣಗಳು ವರದಿಯಾಗಿವೆ. ಇದು ಆರೂವರೆ ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾದ ದಿನವಾಗಿದೆ. ಈ ಮೂಲಕ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1.23 ಕೋಟಿಗೆ ಹೆಚ್ಚಳವಾಗಿದೆ. ಮೃತರ ಸಂಖ್ಯೆಯು 1,64,110ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ದೈನಂದಿನ ಪ್ರಕರಣಗಳು ಮತ್ತು ಸಾವಿನ ಸಂಖ್ಯೆಎರಡು ವಾರಗಳಲ್ಲಿ ಹೆಚ್ಚಳವಾಗಿದೆ. ಈ ಸಂಬಂಧ ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ಶುಕ್ರವಾರ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮತ್ತು ಎಲ್ಲಾ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು. ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT