ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಂತರ ಕೊರೊನಾ ವೈರಸ್: ದೇಶದಲ್ಲಿ ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆ

Last Updated 8 ಜನವರಿ 2021, 8:29 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಈವರೆಗೆ 82 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಜನವರಿ 6ರ ತನಕ 76 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ ಪತ್ತೆಯಾಗಿತ್ತು. ಆದರೆ ಶುಕ್ರವಾರಕ್ಕೆ ಈ ಪ್ರಕರಣಗಳ ಸಂಖ್ಯೆ 82ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಅಲ್ಲದೇ ಮಾದರಿಗಳನ್ನು ಐಎನ್‌ಎಸ್‌ಎಸಿಓಜಿ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT