ಶನಿವಾರ, ಫೆಬ್ರವರಿ 4, 2023
28 °C

ಆರೋಪಿ ಮನೆ ಶೋಧದ ವೇಳೆ ಹೃದಯಾಘಾತದಿಂದ ತಂದೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂಟಿ, ಜಾರ್ಖಂಡ್‌: ಜಾನುವಾರು ಕಳ್ಳಸಾಗಾಣಿಕೆ ಮೊಕದ್ದಮೆಯ ಆರೋಪಿಯೊಬ್ಬನ ಮನೆಯಲ್ಲಿ ಶೋಧಕಾರ್ಯ ನಡೆಸಲು ಪೊಲೀಸರು ತೆರಳಿದ್ದ ವೇಳೆ ಆರೋಪಿಯ ತಂದೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಲ್ಲಿ ಭಾನುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಆರೋಪಿ ಇಝರ್‌ ಅಹ್ಮದ್‌ ಎಂಬಾತನನ್ನು ಬಂಧಿಸಲು ರೊಡೊ ಗ್ರಾಮಕ್ಕೆ ಪೊಲೀಸರು ತೆರಳಿದ್ದ ಪೊಲೀಸರು, ಆತನ ಮನೆಯನ್ನು ಶೋಧಿಸುವ ವೇಳೆ ತಂದೆ ಮಹಮ್ಮದ್ ನಿಜಾಮುದ್ದೀನ್‌ ಅವರು ಇದ್ದಕ್ಕಿದ್ದಂತೆ ಕುಸಿದರು. ಅವರು ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಪೊಲೀಸರು ತಳ್ಳಿದ್ದರಿಂದ ಕೆಳಗೆ ಬಿದ್ದು ಅವರು ಮೃತಪಟ್ಟರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಿಜಾಮುದ್ದೀನ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು