ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: 86 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

6 ತಿಂಗಳ ಮಗುವಿನಿಂದ ಹಿಡಿದು 90ರ ವೃದ್ಧೆವರೆಗೆ ದೆಹಲಿ ಸುರಕ್ಷಿತವಲ್ಲ: ಸ್ವಾತಿ ಮಲಿವಾಲ್
Last Updated 8 ಸೆಪ್ಟೆಂಬರ್ 2020, 16:46 IST
ಅಕ್ಷರ ಗಾತ್ರ

ನವದೆಹಲಿ: ನೈರುತ್ಯ ದೆಹಲಿಯ ಚಾವ್ಲಾ ಪ್ರದೇಶದಲ್ಲಿ 86 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಕೊಳಾಯಿ ರಿಪೇರಿಗಾರ ಸೋನು (37) ಎಂಬಾತನನ್ನು ಬಂಧಿಸಲಾಗಿದೆ.

‘ಸೋಮವಾರ ಸಂಜೆ ವೃದ್ಧೆ ತನ್ನ ಹಳ್ಳಿಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ವೃದ್ಧೆಗೆ ಹಳ್ಳಿಯ ತನಕ ಲಿಫ್ಟ್ ಕೊಡುವುದಾಗಿ ಆರೋಪಿ ತನ್ನ ದ್ವಿಚಕ್ರವಾಹನದಲ್ಲಿ ಹತ್ತಿಸಿಕೊಂಡಿದ್ದ. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಹಿಳೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಮಹಿಳೆಯ ಆರೋಗ್ಯ ಸ್ಥಿರವಾಗಿದೆ ಎಂದೂ ಪೊಲೀಸರು ಹೇಳಿದ್ದಾರೆ.

ಮಹಿಳೆಯ ಅಳುವಿನ ದನಿ ಕೇಳಿ ಸಮೀಪದ ಹೊಲದಲ್ಲಿ ಜನರು ಓಡಿಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಜನರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತೀವ್ರ ರಕ್ತಸ್ರಾವ ಮತ್ತು ಆಘಾತಕ್ಕೊಳಗಾಗಿದ್ದ ಮಹಿಳೆಯನ್ನು ಪೊಲೀಸರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮಹಿಳಾ ಆಯೋಗ ಖಂಡನೆ: ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ‘6 ತಿಂಗಳ ಮಗುವಿನಿಂದ ಹಿಡಿದು 90 ವರ್ಷದ ವೃದ್ಧೆಯವರೆಗೆ ದೆಹಲಿ ಸುರಕ್ಷಿತವಲ್ಲ ಎಂಬುದನ್ನು ಈ ಘಟನೆ ಸೂಚಿಸುತ್ತದೆ’ ಎಂದಿದ್ದಾರೆ.

‘ಅತ್ಯಾಚಾರಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಆರೋಪಿ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ’ ಎಂದೂ ಮಹಿಳಾ ಹಕ್ಕುಗಳ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT