ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕೋಲಾ: 89 ವರ್ಷಗಳ ಬಳಿಕ ಅಂದು ಗಾಂಧೀಜಿ ಭೇಟಿ ಕೊಟ್ಟಿದ್ದ ಅದೇ ದಿನ ರಾಹುಲ್‌ ಭೇಟಿ

Last Updated 17 ನವೆಂಬರ್ 2022, 11:11 IST
ಅಕ್ಷರ ಗಾತ್ರ

ಅಕೋಲಾ: ಮಹಾರಾಷ್ಟ್ರದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು 89 ವರ್ಷಗಳ ಹಿಂದೆ ಭೇಟಿ ಕೊಟ್ಟಿದ್ದ ಅಕೋಲಾಗೆ ಗುರುವಾರ ತಲುಪಿದ್ದಾರೆ.

ಕಾಕತಾಳೀಯವೆಂಬಂತೆ ಮಹಾತ್ಮ ಗಾಂಧಿ ಭೇಟಿ ಕೊಟ್ಟ ಅದೇ ದಿನದಂದು ರಾಹುಲ್ ಗಾಂಧಿ ಅಕೋಲಾಗೆ ಭೇಟಿ ನೀಡಿದ್ದಾರೆ.

ಇದು ಯೋಜಿತವಾಗಿರಲಿಲ್ಲ. ಆದರೆ ಮಹಾತ್ಮ ಗಾಂಧಿ ಅವರು ಭೇಟಿ ಕೊಟ್ಟಿದ್ದ ದಿನದಂದೇ ನನಗೆ ಇಲ್ಲಿಗೆ ಆಗಮಿಸಲು ಸಾಧ್ಯವಾಗಿರುವುದು ಅತೀವ ಸಂತಸ ತಂದಿದೆ ಎಂದು ರಾಹುಲ್ ಪ್ರತಿಕ್ರಿಯಿಸಿದ್ದಾರೆ.

ಗಾಂಧೀಜಿ ಇಡೀ ದೇಶಕ್ಕೇ ದಿಕ್ಕು ತೋರಿಸಿದ ಮಹಾನ್ ವ್ಯಕ್ತಿಯಾಗಿದ್ದು, ದಯವಿಟ್ಟು ಅವರ ಯಾತ್ರೆ ಜೊತೆಗೆ ನನ್ನನ್ನು ಹೋಲಿಕೆ ಮಾಡಬೇಡಿ, ನಾನು ಏನು ಅಲ್ಲ ಎಂದು ರಾಹುಲ್ ವಿನಂತಿ ಮಾಡಿದರು.

1933ರಲ್ಲಿ ಮಹಾರಾಷ್ಟ್ರದ ಅಕೋಲಾಗೆ ಮಹಾತ್ಮ ಗಾಂಧಿ ಭೇಟಿ ಕೊಟ್ಟಿದ್ದರು.

ಸೆಪ್ಟೆಂಬರ್ 7ಕ್ಕೆ ಕನ್ಯಾಕುಮಾರಿಯಿಂದ ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಪಾದಯಾತ್ರೆ, ಕಾಶ್ಮೀರದವರೆಗೆ ಸುಮಾರು 3,570 ಕಿ.ಮೀ. ದೂರವನ್ನು ಕ್ರಮಿಸಲಿದೆ. ಈ ಯಾತ್ರೆಯು ಐದು ತಿಂಗಳ ಅವಧಿಯಲ್ಲಿ 12 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದು ಹೋಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT