ಭಾನುವಾರ, ಮೇ 9, 2021
26 °C

ಗಂಗಾ ನದಿಗೆ ಉರುಳಿಬಿದ್ದ ಪಿಕಪ್‌ ವಾಹನ: ಒಂಬತ್ತು ಮಂದಿ ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಪಟ್ನಾ (ಬಿಹಾರ): ಇಲ್ಲಿನ ದಾನಪುರ ಪ್ರದೇಶದಲ್ಲಿ ಶುಕ್ರವಾರ ಗಂಗಾ ನದಿಯಲ್ಲಿ ದೋಣಿಗಳನ್ನು ಸೇರಿಸಿ ನಿರ್ಮಿಸಿದ ಸೇತುವೆಯ ಮೇಲಿನಿಂದ ಪಿಕ್‌ಅಪ್‌ ಜೀಪು ಉರುಳಿಬಿದ್ದು 9 ಮಂದಿ ಮೃತಪಟ್ಟಿದ್ದಾರೆ.

ವಾಹನದಲ್ಲಿ 13 ಮಂದಿ ಇದ್ದರು. ನಾಲ್ವರು ಈಜಿ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ.

ದಾನಪುರದ ಚಿತ್ರಕೂಟ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಅಖಿಪುರಕ್ಕೆ ವಾಪಸಾಗುತ್ತಿದ್ದಾಗ  ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಧುಮುಕಿತ್ತು. 

ಎನ್‌ಡಿಆರ್‌ಎಫ್‌ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹ 4 ಲಕ್ಷ ಪರಿಹಾರ ಘೋಷಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು