ಗುರುವಾರ , ಮೇ 26, 2022
26 °C

ಆಂಧ್ರ ಪ್ರದೇಶ: APSRTC ಬಸ್‌ ನದಿಗೆ ಉರುಳಿ 9 ಸಾವು

ಪ್ರಜಾವಾಣಿ ವಾರ್ತೆ/ ಪಿಟಿಐ Updated:

ಅಕ್ಷರ ಗಾತ್ರ : | |

ಅಮರಾವತಿ(ಪಿಟಿಐ): ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಬಳಿ ಬುಧವಾರ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನದಿಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಸ್‌ನಲ್ಲಿ ಒಟ್ಟು 45 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನರು ಕೆಲವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊರತೆಗೆದರು. ಬಸ್ ನದಿಗೆ ಧುಮುಕಿದಾಗ ಕಿಟಕಿಯ ಗಾಜುಗಳು ತಗುಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಬಸ್‌ ತೆಲಂಗಾಣದ ಅಶ್ವರಾವ್‌ಪೇಟೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜಲ್ಲೇರು ನದಿಯ ಸೇತುವೆ ಮೇಲೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ದಾರಿ ಮಾಡಿಕೊಡಲು ಬಸ್ ಚಾಲಕ ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.

‘ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು