ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದ ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದೂ ಹೇಳಿದ್ದಾರೆ.

ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32 ವರ್ಷದ ಆರೋಪಿಯು ಅಲ್ಲಿಂದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದೂ ವಿವರಿಸಿದ್ದಾರೆ.

ಬಾಲಕಿಯು ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ತಲುಪಿದ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.