ಶನಿವಾರ, ನವೆಂಬರ್ 28, 2020
25 °C

ತ್ರಿಪುರಾ: 90 ವರ್ಷದ ವೃದ್ಧೆ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಗರ್ತಲಾ: ತ್ರಿಪುರಾದಲ್ಲಿ 90 ವರ್ಷದ ವೃದ್ಧೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಆರೋಪಿಗಳಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಉತ್ತರ ತ್ರಿಪುರ ಜಿಲ್ಲೆಯ ಕಾಂಚನಪುರ ಉಪವಿಭಾಗದ ಬಾರ್‌ಹಲ್ದಿ ಹಳ್ಳಿಯಲ್ಲಿ ಅ.24ರಂದು ಈ ಘಟನೆ ನಡೆದಿದ್ದು, ವೃದ್ಧೆಯ ಕುಟುಂಬದ ಸದಸ್ಯರು ಅ.29ರಂದು ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಅತ್ಯಾಚಾರವೆಸಗಿನ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಭಾನುಪದ ಚಕ್ರವರ್ತಿ ತಿಳಿಸಿದ್ದಾರೆ.

ಮನೆಯಲ್ಲಿ ಮಹಿಳೆಯು ಒಬ್ಬರೇ ಇದ್ದ ಸಂದರ್ಭದಲ್ಲಿ ನುಗ್ಗಿದ ಇಬ್ಬರು ಅತ್ಯಾಚಾರವೆಸಗಿದ್ದಾರೆ. ಘಟನೆ ಬಳಿಕ ವೃದ್ಧೆ ಅನಾರೋಗ್ಯಕ್ಕೀಡಾಗಿದ್ದು, ಪೊಲೀಸರ ಬಳಿ ದೂರು ನೀಡಿರಲಿಲ್ಲ. ಘಟನೆಯ ಕುರಿತು ಕುಟುಂಬ ಸದಸ್ಯರಿಗೆ ಮಾಹಿತಿ ದೊರೆತ ಬಳಿಕ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಹೇಳಿಕೆ ಪಡೆದಿದ್ದಾರೆ. ಇದರ ಅನುಸಾರ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು