ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಇಂಟರ್‌ನೆಟ್‌ ಸೇವೆ ಸ್ಥಗಿತದ 93 ಆದೇಶಗಳು ಪ್ರಕಟ

Last Updated 3 ಡಿಸೆಂಬರ್ 2021, 13:41 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸುವ ಸಲುವಾಗಿ ಹೊರಡಿಸಲಾಗಿದ್ದ 93 ಆದೇಶಗಳನ್ನು ಜಮ್ಮು ಕಾಶ್ಮೀರ ಆಡಳಿತವು ಪ್ರಕಟಿಸಿದೆ.

ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿರುವುದನ್ನು ಖಚಿತಪಡಿಸಲು ಸರ್ಕಾರ ಹೊರಡಿಸಿದ ಎಲ್ಲ ಆದೇಶಗಳನ್ನು ಪ್ರಕಟಿಸುವಂತೆ 2020ರ ಜನವರಿಯಲ್ಲಿ ಸುಪ್ರೀಂಕೋರ್ಟ್‌ ನೀಡಿದ್ದ ನಿರ್ದೇಶನದ ಹಿನ್ನೆಲೆಯಲ್ಲಿ ಆದೇಶಗಳನ್ನು ಗೃಹ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸುವ ಸಂಬಂಧ ಸಂಬಂಧಿಸಿದ ಪ್ರಾಧಿಕಾರದಿಂದ 76 ಆದೇಶಗಳು ಸೇರಿ ಒಟ್ಟು 93 ಆದೇಶಗಳನ್ನು ಹೊರಡಿಸಲಾಗಿದ್ದು, ಎಲ್ಲ ಆದೇಶಗಳು ಸಾರ್ವಜನಿಕರಿಗೆ ಲಭ್ಯವಾಗುವ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ಇಂಟರ್‌ನೆಟ್‌ ಸೇರಿದಂತೆ ದೂರಸಂಪರ್ಕ ಸೇವೆ ಸ್ಥಗಿತಗೊಳಿಸುವ ಸಂಬಂಧ ಹೊರಡಿಸಲಾದ ಆದೇಶಗಳು ಹಾಗೂ ಸಿಆರ್‌ಪಿಸಿ ಸೆಕ್ಷನ್‌ 144ರ ಅಡಿ ಭವಿಷ್ಯದಲ್ಲಿ ಹೊರಡಿಸುವ ಆದೇಶಗಳಿಂದ ಬಾಧಿತರಾದವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಆದೇಶಗಳನ್ನು ಪ್ರಕಟಿಸಬೇಕು ಎಂದು 2020ರ ಜ.10ರಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT