ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

939 ಮಂದಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ, ಶೌರ್ಯ ಪ್ರಶಸ್ತಿ

Last Updated 25 ಜನವರಿ 2022, 12:38 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಣನೀಯ ಸೇವೆಗಾಗಿ 189 ಮಂದಿಗೆ ಶೌರ್ಯ ಪ್ರಶಸ್ತಿ ಸೇರಿ 939 ಪೊಲೀಸ್‌ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಮುನ್ನಾ ದಿನವಾದ ಮಂಗಳವಾರ ಪೊಲೀಸ್ ಪದಕಕ್ಕಾಗಿ ಆಯ್ಕೆ ಮಾಡಿದೆ.

ಶೌರ್ಯ ಪ್ರಶಸ್ತಿ ಪುರಸ್ಕೃತ 189 ಸಿಬ್ಬಂದಿಯಲ್ಲಿ 134 ಮಂದಿಯನ್ನು ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಸೇವಾ ಹಂತದಲ್ಲಿ ತೋರಿದ ಶೌರ್ಯಕ್ಕಾಗಿ ಆಯ್ಕೆ ಮಾಡಲಾಗಿದೆ. 47 ಮಂದಿ ಈಶಾನ್ಯ ವಲಯದಲ್ಲಿ ಕಾರ್ಯನಿರ್ವಹಿಸಿದವರು.

ಶೌರ್ಯ ಪ್ರಶಸ್ತಿ, ರಾಷ್ಟ್ರಪತಿಗಳ ಪೊಲೀಸ್ ಪದಕ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯವು ಪ್ರಕಟಿಸಿದೆ. 88 ಮಂದಿಗೆ ಸೇವಾ ಪದಕ ಮತ್ತು 662 ಮಂದಿಗೆ ವಿಶಿಷ್ಟ ಸೇವಾ ಪದಕ ನೀಡಿ ಪುರಸ್ಕರಿಸಲಾಗುತ್ತದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಗರಿಷ್ಠ ಅಂದರೆ 115 ಪದಕ ನೀಡಲಾಗಿದೆ. ಉಳಿದಂತೆ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌), ಛತ್ತೀಸಗಡದ 10 ಸಿಬ್ಬಂದಿ, ಒಡಿಶಾದ 9, ಮಹಾರಾಷ್ಟ್ರದ ಏಳು ಮಂದಿ, ಇಂಡೊ–ಟಿಬೆಟನ್‌ ಗಡಿ ಪೊಲೀಸ್ (ಐಟಿಬಿಪಿ) ಮತ್ತು ಸಶಸ್ತ್ರ ಸೀಮಾ ಬಲದ (ಎಸ್‌ಎಸ್‌ಬಿ) ತಲಾ ಮೂವರು, ಗಡಿ ಭದ್ರತಾ ಪಡೆಯ ಇಬ್ಬರು ಶೌರ್ಯಪ್ರಶಸ್ತಿ ಪುರಸ್ಕೃತರಲ್ಲಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT