ಮಂಗಳವಾರ, ಅಕ್ಟೋಬರ್ 20, 2020
26 °C

ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ವೃದ್ಧನ ಮೇಲೆ ಹಲ್ಲೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಲಲಿತ್ ಪುರ (ಉತ್ತರಪ್ರದೇಶ): ಇಲ್ಲಿನ ರೋಡ ಗ್ರಾಮದಲ್ಲಿ 65 ವರ್ಷದ ದಲಿತ ವೃದ್ಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ಅವರಿಗೆ ಬಲವಂತವಾಗಿ ಮೂತ್ರ ಕುಡಿಸಿದ ಘಟನೆ ವರದಿಯಾಗಿದೆ. 

ಸೋನು ಯಾದವ್‌ ಎನ್ನುವವ ವೃದ್ಧ ವ್ಯಕ್ತಿಗೆ ಮೂತ್ರ ಕೂಡಿಸಿ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ಸೋನು ಯಾದವ್‌ ವೃದ್ಧ ವ್ಯಕ್ತಿಯ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಸೋನು ಯಾದವ್‌ ಆ ಕುಟುಂಬದವರಿಗೆ ದೂರು ವಾಪಾಸು ಪಡೆಯುವಂತೆ ಒತ್ತಡ ಹಾಕಿದ್ದ. 

ಸೋನು ಯಾದವ್‌ ಬೆದರಿಕೆ ಹಾಗೂ ಒತ್ತಡಕ್ಕೆ ಮಣಿಯದಿದ್ದಾಗ ಬಲವಂತವಾಗಿ ಮೂತ್ರ ಕುಡಿಸಿ, ಕಟ್ಟಿಗೆಯಿಂದ ಹಲ್ಲೆ ಮಾಡಲಾಯಿತು ಎಂದು ವೃದ್ಧ ವ್ಯಕ್ತಿ ತಿಳಿಸಿದ್ದಾರೆ.

ರೋಡ ಗ್ರಾಮದಲ್ಲಿ ಪ್ರಭಾವಿ ವ್ಯಕ್ತಿಗಳು ಇಬ್ಬರು ದಲಿತರ ಮೇಲೆ ಹಲ್ಲೆ ಮಾಡಿರುವುದು ತಿಳಿದುಬಂದಿದೆ. ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು ಉಳಿದವರ ಪತ್ತಗೆ ಕ್ರಮಕೈಗೊಳ್ಳಲಾಗಿದೆ. ನಾವು ಯಾವುದೇ ರೀತಿಯ ಹಿಂಸೆಯನ್ನು ಸಹಿಸುವುದಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಲಲಿತ್‌ಪುರದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಮಿರ್ಜಾ ಬೇಗ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು