ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಹೋಟೆಲ್‌ಗೆ ಬಾಂಬ್ ದಾಳಿ ಬೆದರಿಕೆ ಕರೆ

Last Updated 23 ಆಗಸ್ಟ್ 2022, 4:32 IST
ಅಕ್ಷರ ಗಾತ್ರ

ಮುಂಬೈ: ವಾಣಿಜ್ಯ ನಗರಿಯ ಪ್ರಮುಖ ಹೋಟೆಲೊಂದಕ್ಕೆ ಬಾಂಬ್ ದಾಳಿ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಹೋಟೆಲ್‌ನ ನಾಲ್ಕು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಬೇಕಿದ್ದರೆ ₹ 5 ಕೋಟಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಮುಂಬೈ ಪೊಲೀಸರು ಶಹರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಯು/ಎಸ್ 336, 507ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಮೂರು ದಿನಗಳ ಹಿಂದಷ್ಟೇ, ಮುಂಬೈ ಪೊಲೀಸರಿಗೆ 26/11 ಮಾದರಿ ದಾಳಿ ನಡೆಸುವ ಬೆದರಿಕೆಯ ಸಂದೇಶ ಬಂದಿತ್ತು. ಪಾಕಿಸ್ತಾನದ ಕೋಡ್‌ ಒಳಗೊಂಡ ದೂರವಾಣಿ ಸಂಖ್ಯೆಯಿಂದ ಈ ಸಂದೇಶ ರವಾನೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಸಮೀಪದ ವಿರಾರ್‌ನಲ್ಲಿ ಓರ್ವನನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT