ಬಿಹಾರ ಸಿಎಂ ನಿತೀಶ್ ಕುಮಾರ್ ನಿವಾಸದ ಬಳಿ ಬಾಂಬ್ ಎಸೆತ

ಪಾಟ್ನಾ: ನಳಂದಾದ ಜನಸಭಾ ಪ್ರದೇಶದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಬಳಿ ಬಾಂಬ್ ಎಸೆಯಲಾಗಿದೆ ಎಂದು ಎಎನ್ಐ ಟ್ವೀಟ್ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
#UPDATE | Police detained one person in connection with a bomb that was hurled near Chief Minister Nitish Kumar's 'Jansabha' site in Nalanda.
— ANI (@ANI) April 12, 2022
ಪಾಟ್ನಾದ ಭಕ್ತಿಯಾರ್ಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೆಡಿಯು ವರಿಷ್ಠರ ಮೇಲೆ ಹಲ್ಲೆ ನಡೆಸಿದ್ದ. ಅದಾದ ಕೆಲವೇ ದಿನಗಳ ಬಳಿಕ ಈ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.