ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಎಂಸಿ ಬಿಡುವವರ ಸಂಖ್ಯೆಯಲ್ಲಿ ಹೆಚ್ಚಳ: ಮಮತಾ ಬ್ಯಾನರ್ಜಿಗೆ ಆತಂಕ

Last Updated 17 ಡಿಸೆಂಬರ್ 2020, 10:27 IST
ಅಕ್ಷರ ಗಾತ್ರ

ಕೋಲ್ಕತ್ತ:ಇನ್ನು ಕೆಲ ತಿಂಗಳುಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಸೇರಿದಂತೆ ಹಿರಿಯ ನಾಯಕರು ಪಕ್ಷ ಬಿಡುತ್ತಿರುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆತಂಕ ಎದುರಾಗಿದೆ.

ಟಿಎಂಸಿಯ ಸುವೇಂದು ಅಧಿಕಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲೇ ಮಮತಾ ಬ್ಯಾನರ್ಜಿ ಅವರು ತಮ್ಮ ನಿವಾಸದಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಬುಧವಾರ ರಾತ್ರಿ ಸಭೆ ನಡೆಸಿದ್ದರು. ಈ ವೇಳೆ ಇನ್ನು ಕೆಲ ನಾಯಕರು ಪಕ್ಷ ತೊರೆಯಲಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ವ್ಯಕ್ತವಾಯಿತು ಎನ್ನಲಾಗಿದೆ.

ರಾಜಕೀಯ ಬೆಳವಣಿಗೆಗಳ ಕುರಿತಂತೆ ಗುರುವಾರ ಬೆಳಗ್ಗೆ ಪಕ್ಷದ ಸಭೆಯೊಂದರಲ್ಲಿ ಮಾತನಾಡಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ನಮ್ಮ ಪಕ್ಷದವರನ್ನು ಶಾಪಿಂಗ್‌ ಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದಿದ್ದಾರೆ.

ಹೋಗುವವರು ಹೋಗಲಿ, ಬರುವವರು ಬರಲಿ ಆದರೆ ಬಂಗಾಳದಲ್ಲಿ ಟಿಎಂಸಿ ಮಾತ್ರ ಸ್ಥಿರವಾಗಿ ಇರಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಶಾಸಕ ಜಿತೇಂದ್ರ ತಿವಾರಿ, ಮೊಂಡಲ್‌ ಸೇರಿದಂತೆ 10ಕ್ಕೂ ಹೆಚ್ಚು ನಾಯಕರು ಈಗಾಗಲೇ ಮಮತಾ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ವೇಳೆಗೆ ಟಿಎಂಸಿಯ ಸಾಕಷ್ಟು ನಾಯಕರು ಬಿಜೆಪಿ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT