ಮುಂಬೈ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣದ ಟರ್ಮಿನಸ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸುವ ಮೂಲಕ ರೈಲ್ವೆ ಅಧಿಕಾರಿಗಳಿಗೆ ತಲೆನೋವು ಉಂಟು ಮಾಡಿದ ಘಟನೆ ವರದಿಯಾಗಿದೆ.
ಆತ ಅರ್ಧ ಗಂಟೆ ಬಳಿಕ ಪ್ಲಾಟ್‌ಫ್ಲಾಮ್‌ನಲ್ಲಿ ನಿಂತಿದ್ದ ಗದಗ ಎಕ್ಸ್‌ಪ್ರೆಸ್ ರೈಲಿನ ಮೇಲೆ ಹಾರಿದ್ದಾನೆ. ಕೂಡಲೇ ಆತನನ್ನು ಬಂಧಿಸಲಾಗಿದೆ.
ಬಂಧಿತ ವ್ಯಕ್ತಿ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಸ್ ಮೇಲೇರಿದ್ದು, ಹೈಟೆನ್ಷನ್ ವೈರ್ ಹಿಡಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದಾನೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಮುನ್ನೆಚ್ಚರಿಕೆಯಾಗಿ ರೈಲ್ವೆ ಅಧಿಕಾರಿಗಳು ತಂತಿಗೆ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದರು. ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯಾವುದೇ ದುಡುಕಿನ ಕೃತ್ಯ ಎಸಗದಂತೆ ವ್ಯಕ್ತಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇವನ್ನೂ ಓದಿ: Covid-19: ಕಳೆದ 149 ದಿನಗಳಲ್ಲೇ ಗರಿಷ್ಠ ಪ್ರಕರಣ ದಾಖಲು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.