ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲವ್‌ ಜಿಹಾದ್‌: ಉತ್ತರ ಪ್ರದೇಶ ಗೃಹ ಸಚಿವಾಲಯದಿಂದ ಕಾನೂನು ಇಲಾಖೆಗೆ ಪ್ರಸ್ತಾವನೆ

Last Updated 20 ನವೆಂಬರ್ 2020, 7:02 IST
ಅಕ್ಷರ ಗಾತ್ರ

ಲಕ್ನೋ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧದ ಕಠಿಣ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು ಎಂದು ಅಲ್ಲಿನ ಗೃಹ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ವರದಿ ಮಾಡಿರುವ ಸುದ್ದಿ ಸಂಸ್ಥೆ ಎಎನ್‌ಐ, 'ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧದ ಕಠಿಣ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು. ಈ ವಿಚಾರವಾಗಿ ಉತ್ತರ ಪ್ರದೇಶದ ಗೃಹ ಇಲಾಖೆಯು ಅಲ್ಲಿನ ಕಾನೂನು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದೆ' ಎಂದು ಹೇಳಿದೆ.

ಲವ್ ಜಿಹಾದ್ ಪ್ರಕರಣಗಳ ಕಡಿವಾಣಕ್ಕೆ ಕಾಯ್ದೆ ರೂಪಿಸಲು ಮಧ್ಯಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ಮಂಗಳವಾರ ತೀರ್ಮಾನಿಸಿತ್ತು.

ಕರ್ನಾಟಕದಲ್ಲಿ ಲವ್‌ ಜಿಹಾದ್ ಹೆಸರಿನಲ್ಲಿ ನಡೆಯುವ ಮತಾಂತರ ತಡೆಗೆ ಪ್ರಬಲ ಕಾನೂನು ರೂಪಿಸಲು ಬಿಜೆಪಿ ಕೋರ್‌ ಕಮಿಟಿಯು ಮೂರು ವಾರಗಳ ಹಿಂದೆ ಒಪ್ಪಿಗೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT