ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರ: ಭಾರತೀಯ ಯೋಧರ ಗುಂಡಿಗೆ ಉಗ್ರ ಬಲಿ

Last Updated 22 ಆಗಸ್ಟ್ 2020, 8:20 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆಸಿದ್ದು ಕನಿಷ್ಠ ಮೂವರು ಭಯೋತ್ಪಾದಕರು ಅಡಗಿ ಕುಳಿತಿರಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಆ ಸ್ಥಳದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಮೊದಲೇ ಮಾಹಿತಿ ಪಡೆಯಲಾಗಿತ್ತು ಎಂದು ಸೇನಾಮೂಲಗಳು ಸ್ಪಷ್ಟಪಡಿಸಿವೆ.

ಬಾರಾಮುಲ್ಲಾ ಜಿಲ್ಲೆಯ ನಾಕಾ ಬಳಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಅಧಿಕಾರಿ ಮತ್ತು ಸಿಆರ್‌ಪಿಎಫ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಅದೇ ವೇಳೆ ಉತ್ತರ ಕಾಶ್ಮೀರ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಉತ್ತರ ಕಾಶ್ಮೀರದಲ್ಲಿರುವ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸಾಜದ್ ಹೈದರ್ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT