ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಳತಿ ಮೆಚ್ಚಿಸಲು ಯುವಕನಿಂದ ದುಬಾರಿ ಬೆಲೆಯ ಬೈಕ್ ಕಳ್ಳತನ

Last Updated 26 ಜನವರಿ 2023, 5:16 IST
ಅಕ್ಷರ ಗಾತ್ರ

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದಲ್ಲಿ ದುಬಾರಿ ಬೆಲೆಯ ಮೋಟಾರು ಸೈಕಲ್‌ಗಳನ್ನು ಕಳ್ಳತನ ಮಾಡುತ್ತಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಸುಭಮ್ ಭಾಸ್ಕರ್ ಪವಾರ್ ಎಂದು ಗುರುತಿಸಲಾಗಿದೆ.

ಆರೋಪಿಯು ತನ್ನ ಗೆಳತಿಯನ್ನು ಮೆಚ್ಚಿಸಲು ದುಬಾರಿ ಬೆಲೆಯ ಮೋಟಾರು ಬೈಕ್‌ಗಳನ್ನು ಕದ್ದಿದ್ದಾನೆ. ಲಾತೂರ್, ಸೋಲಾಪುರ ಮತ್ತು ಪುಣೆ ಸೇರಿದಂತೆ ವಿವಿಧ ಸ್ಥಳಗಳಿಂದ 16.05 ಲಕ್ಷದ 13 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಉಪ ಪೊಲೀಸ್ ಆಯುಕ್ತ ಸಚಿನ್ ಗುಂಜಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT