ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

ಹಿಂಗೋಲಿ (ಮಹಾರಾಷ್ಟ್ರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಯುವ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ಪಾಲ್ಗೊಂಡರು. ಆದಿತ್ಯ ಹಿಂಗೋಳಿ ಜಿಲ್ಲೆಯ ಕಲಾಮ್ನುರಿಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದರು.
ಮಹಾರಾಷ್ಟ್ರ ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಅಂಬಾದಾಸ್ ದಾನ್ವೆ ಮತ್ತು ಮಾಜಿ ಶಾಸಕ ಸಚಿನ್ ಅಹಿರ್ ಅವರು ಆದಿತ್ಯ ಅವರೊಂದಿಗೆ ಯಾತ್ರೆಯಲ್ಲಿ ಕಾಣಿಸಿಕೊಂಡರು. ಯಾತ್ರೆ ವೇಳೆ ರಾಹುಲ್ ಮತ್ತು ಆದಿತ್ಯ ನೆರೆದಿದ್ದವರತ್ತ ಕೈ ಬೀಸುತ್ತಾ ಮುನ್ನಡೆದರು.
ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ.
ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು ಜನರೊಂದಿಗೆ ಸಮಾಲೋಚನೆ ನಡೆಸಿದರು.
ಗುರುವಾರ (ನವೆಂಬರ್ 10) ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕರಾದ ಸುಪ್ರಿಯಾ ಸುಳೆ ಮತ್ತು ಜೀತೇಂದ್ರ ಅವಾದ್ ಅವರೂ ಯಾತ್ರೆಯಲ್ಲಿ ಭಾಗವಹಿಸಿದ್ದರು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಭಾಗವಹಿಸಿರಲಿಲ್ಲ. ಉದ್ಧವ್ ಠಾಕ್ರೆ ಅವರಿಗೂ ಆಹ್ವಾನ ನೀಡಲಾಗಿದೆ.
Walking for our democracy and our Constitution… pic.twitter.com/wFQQKIXroA
— Aaditya Thackeray (@AUThackeray) November 11, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.