ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಿಪಿಪಿ ಮೂಲಕ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ₹30 ಸಾವಿರ ಕೋಟಿ ಲಾಭ’

Last Updated 29 ಜುಲೈ 2021, 19:31 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) 2020–21ರ ಅವಧಿಯಲ್ಲಿ ಪಿಪಿಪಿ (ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವ) ವಿಮಾನ ನಿಲ್ದಾಣಗಳ ಮೂಲಕ ಸುಮಾರು ₹30,069 ಕೋಟಿ ಲಾಭ ಗಳಿಸಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್, ‘2020-21ರ ಅವಧಿಯಲ್ಲಿ ಎಎಐ ನಡೆಸುತ್ತಿರುವ ವಿಮಾನ ನಿಲ್ದಾಣಗಳಿಂದ ಖಾತರಿ ಶುಲ್ಕ, ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮೂಲಕ ಕೇಂದ್ರ ಸರ್ಕಾರ ಸುಮಾರು ₹ 846 ಕೋಟಿ ಸ್ವೀಕರಿಸಿದೆ’ ಎಂದು ಹೇಳಿದ್ದಾರೆ.

ದೆಹಲಿ, ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ನಾಗ್ಪುರ ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆಯನ್ನು ಪಿಪಿಪಿ ಮಾದರಿಯಲ್ಲಿ ನಿಭಾಯಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT