ಶನಿವಾರ, ಮೇ 28, 2022
26 °C

ಪಂಜಾಬ್ ವಿಧಾನಸಭೆ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಆಮ್ ಆದ್ಮಿ ಪಕ್ಷವು 2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗರ್‌ಶಂಕರ್ ಕ್ಷೇತ್ರದಿಂದ ಜೈ ಕಿಶನ್ ರೌಡಿ, ತಲ್ವಾಂಡಿ ಸಬೊದಿಂದ ಬಲ್ಜಿಂದರ್ ಕೌರ್, ಜಾಗ್ರಾನ್ ಕ್ಷೇತ್ರದಿಂದ ಸರ್ವಜಿತ್ ಕೌರ್ ಮನುಕೆ ಅವರು ಸೇರಿ ಇತರ 7 ಹಾಲಿ ಶಾಸಕರಿಗೆ ಪಕ್ಷ ಟಿಕೆಟ್ ನೀಡಿದೆ.

ದೇಶದ 7 ರಾಜ್ಯಗಳಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದ್ದು, ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ವರ್ಷಾಂತ್ಯದ ಹೊತ್ತಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪಂಜಾಬ್ ಹೊರತುಪಡಿಸಿದರೆ ಉಳಿದ ಆರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ನಂತರ ಆಮ್ ಆದ್ಮಿ ಪಕ್ಷವು ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಅತಂತ್ರ ವಿಧಾನಸಭೆಯ ಲೆಕ್ಕಾಚಾರಗಳೂ ನಡೆಯುತ್ತಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು