ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ: ಆಪ್‌ ಶಾಸಕ ಸೋಮನಾಥ್‌ ಭಾರ್ತಿಗೆ 2 ವರ್ಷ ಜೈಲು

Last Updated 23 ಜನವರಿ 2021, 12:10 IST
ಅಕ್ಷರ ಗಾತ್ರ

ನವದೆಹಲಿ: 2016ರಲ್ಲಿ ಏಮ್ಸ್‌ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ್‌ ಭಾರ್ತಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಬಗ್ಗೆ ದೆಹಲಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಸಂಸ್ಥೆಯ ಭದ್ರತಾ ಸಿಬ್ಬಂದಿ ಮೇಲೆ ಭಾರ್ತಿ ಹಲ್ಲೆ ನಡೆಸಿದ್ದಾರೆ ಎಂದು ಏಮ್ಸ್‌ನ ಭದ್ರತಾ ವಿಭಾಗದ ಮುಖ್ಯಸ್ಥರು ಸೆಪ್ಟೆಂಬರ್ 9, 2016ರಲ್ಲಿ ದೂರು ನೀಡಿದ್ದರು.

ದೆಹಲಿ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಆಮ್‌ ಆದ್ಮಿ ಪಕ್ಷವು, 'ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ ಮತ್ತು ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದೇವೆ. ಆದರೆ, ಈ ಪ್ರಕರಣದಲ್ಲಿ ಸೋಮನಾಥ್‌ ಭಾರ್ತಿ ಅವರಿಗೆ ಅನ್ಯಾಯವಾಗಿದೆ ಎಂಬುದಾಗಿ ನಾವು ಭಾವಿಸುತ್ತೇವೆ' ಎಂದು ತಿಳಿಸಿದೆ.

'ಸೋಮನಾಥ್ ಭಾರ್ತಿ ಅವರು ಜನಪ್ರಿಯ ನಾಯಕರಾಗಿದ್ದಾರೆ. ಅವರ ಮತಕ್ಷೇತ್ರದ ಪ್ರತಿಯೊಬ್ಬರೂ ಅವರನ್ನು ಪ್ರೀತಿಸುತ್ತಾರೆ. ಅವರು ತಮ್ಮ ಜನರಿಗೋಸ್ಕರ 24 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ. ಅವರಿಗೆ ಶಿಕ್ಷೆಯಾದ ಸುದ್ದಿ ಸುದ್ದಿ ಹರಡುತ್ತಿದ್ದಂತೆ ಅವರ ಕ್ಷೇತ್ರದ ಜನರು ಸಾಕಷ್ಟು ದುಃಖಿತರಾಗಿದ್ದಾರೆ' ಎಂದು ಎಎಪಿ ಬೇಸರ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT