ಗುರುವಾರ , ಜುಲೈ 7, 2022
25 °C

ಗುಜರಾತ್: ಎಎಪಿ–ಬಿಟಿಪಿ ಮೈತ್ರಿ ಸಂಭವ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಮುಂಬರಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಭಾರತೀಯ ಟ್ರೈಬಲ್ ಪಾರ್ಟಿಯು (ಬಿಟಿಪಿ) ಎಎಪಿ ಜತೆಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಬಿಟಿಪಿ ಮುಖ್ಯಸ್ಥ ಮಹೇಶ್ ವಾಸವಾ ಅವರು ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿಯಲ್ಲಿ ಭೇಟಿ ಮಾಡಿದರು. 

ದೆಹಲಿಯಲ್ಲಿ ಎಎಪಿ ಸರ್ಕಾರವು ಆರಂಭಿಸಿರುವ ಮೊಹಲ್ಲಾ ಕ್ಲಿನಿಕ್‌ಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಮಹೇಶ್ ನೋಡಿದ್ದಾರೆ. ಜತೆಗೆ ದೆಹಲಿ ಸರ್ಕಾರಿ ಶಾಲೆಗಳಿಗೂ ಭೇಟಿ ನೀಡಿದ್ದಾರೆ. ‘ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು
ಜನರನ್ನು ತಮ್ಮ ಲಾಭಕ್ಕೆ ಬಳಸಿಕೊಂಡಿವೆ. ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎಎಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಯೋಚಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು