ಗುರುವಾರ , ಮೇ 26, 2022
24 °C

ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಜನವರಿ 18ರಂದು ಘೋಷಣೆ: ಕೇಜ್ರಿವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಪಂಜಾಬ್‌ ವಿಧಾನಸಭೆ ಚುನವಾಣೆಗೆ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಮಂಗಳವಾರ (ಜನವರಿ 18ರಂದು) ಘೋಷಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂದು ಜನರೇ ಹೆಸರು ಶಿಫಾರಸು ಮಾಡಬೇಕು ಎಂದು ಕೇಜ್ರಿವಾಲ್ ಜನವರಿ 13ರಂದು ಮನವಿ ಮಾಡಿದ್ದರು. ಅದಕ್ಕಾಗಿ ಪಕ್ಷವು ಪ್ರತ್ಯೇಕ ಮೊಬೈಲ್‌ ಸಂಖ್ಯೆ ತೆರೆದಿತ್ತು.

ಇದನ್ನೂ ಓದಿ: 

ಪಕ್ಷದ ಸಂಸದ ಭಗವಂತ್‌ ಮಾನ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿಸಲು ಕೇ‌ಜ್ರಿವಾಲ್‌ ಬಯಸಿದ್ದರು. ಆದಾಗ್ಯೂ, ಜನರೇ ಆ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಪಂಜಾಬ್‌ ವಿಧಾನಸಭೆಗೆ 2022ರಲ್ಲಿ ನಡೆಯುವ ಚುನಾವಣೆ ವೇಳೆ ಸಿಖ್‌ ಸಮುದಾಯದ ವ್ಯಕ್ತಿಯೇ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಪಕ್ಷದ ಆಯ್ಕೆ ಬಗ್ಗೆ ಇಡೀ ಪಂಜಾಬ್‌ ಹೆಮ್ಮೆಪಡಲಿದೆ ಎಂದು ಕೇಜ್ರಿವಾಲ್‌ ಕಳೆದ ವರ್ಷ ಜೂನ್‌ನಲ್ಲಿ ಹೇಳಿಕೊಂಡಿದ್ದರು.

‌117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಫೆಬ್ರುವರಿ 14ರಂದು ಚುನಾವಣೆ ನಿಗದಿಯಾಗಿತ್ತು.

'ಫೆಬ್ರುವರಿ 16ರಂದು ಗುರು ರವಿದಾಸ್ ಜಯಂತಿ ಇರುವುದರಿಂದ, ರಾಜ್ಯದ ಬಹಳಷ್ಟು ಜನರು ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡಿ ಜಯಂತಿ ಆಚರಿಸಲಿದ್ದಾರೆ. ಅವರಿಗೆ, ಮತದಾನದಲ್ಲಿ ಪಾಲ್ಗೊಳ್ಳಲು ತೊಂದರೆಯಾಗದಂತೆ ನೋಡಿಕೊಳ್ಳಲು, ಚುನಾವಣೆಯನ್ನು ಕನಿಷ್ಠ ಆರು ದಿನ ಮುಂದೂಡಬೇಕು' ಎಂದು ಆಡಳಿತ ಪಕ್ಷ ಕಾಂಗ್ರೆಸ್‌ ಸೇರಿದಂತೆ ವಿವಿಧ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಅವರಿಗೆ ಪತ್ರ ಬರೆದಿದ್ದವು.

ಹೀಗಾಗಿ ಮತದಾನ ದಿನಾಂಕ ಫೆಬ್ರುವರಿ 20ಕ್ಕೆ ಮರುನಿಗದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು