ಜಮ್ಮು: ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸತೀಶ್ ಶರ್ಮಾ ಶಾಸ್ತ್ರಿ ಮತ್ತು ಎಂಟು ಮಂದಿ ಕಾರ್ಯಕರ್ತರು ಜಮ್ಮುವಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಜಮ್ಮುವಿನ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಸಂಸದ ಜುಗುಲ್ ಕಿಶೋರ್ ಶರ್ಮಾ, ಪಕ್ಷಕ್ಕೆ ಸೇರಿಕೊಂಡ ಆಪ್ ನಾಯಕರನ್ನು ಸ್ವಾಗತಿಸಿದ್ದಾರೆ.
ಬಿಜೆಪಿ ಸೇರಿರುವುದು ನನ್ನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಸಮಾಜಕ್ಕಾಗಿ ಕೆಲಸ ಮಾಡಲು ಇದು ನೆರವಾಗಲಿದೆ ಎಂದು ಸತೀಶ್ ಶರ್ಮಾ ತಿಳಿಸಿದ್ದಾರೆ.
ಪಕ್ಷದ ಚಿಂತನೆ ಮತ್ತು ಸಿದ್ಧಾಂತವನ್ನು ಮೆಚ್ಚಿ ಬಿಜೆಪಿ ಸೇರುವವರಿಗೆ ಸದಾ ಸ್ವಾಗತ. ಶರ್ಮಾ ಅವರ ಸೇರ್ಪಡೆಯಿಂದ ನಮಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ರವೀಂದರ್ ರೈನಾ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.