ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದೇ ಸರ್ಕಾರ ಭ್ರಷ್ಟ ಸಚಿವರನ್ನು ಜೈಲಿಗೆ ಕಳುಹಿಸಿಲ್ಲ: ಕೇಜ್ರಿವಾಲ್

ಅಕ್ಷರ ಗಾತ್ರ

ಬೆಂಗಳೂರು: ಯಾವುದೇ ಸರ್ಕಾರ ಭ್ರಷ್ಟ ಸಚಿವರನ್ನು ಜೈಲಿಗೆ ಕಳುಹಿಸಿಲ್ಲ, ಆದರೆ ಆಮ್‌ ಆದ್ಮಿ ಪಾರ್ಟಿ ಮಾತ್ರ ಅದನ್ನು ಮಾಡಿತೋರಿಸಿದೆ ಎಂದು ಆಪ್ ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಪಂಜಾಬ್ ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಆರೋಗ್ಯ ಸಚಿವ ವಿಜಯ್ ಸಿಂಗ್ ಅವರನ್ನು ಮೇ 24ರಂದು ಬಂಧಿಸಲಾಗಿದೆ.

ವಿಜಯ್ ಸಿಂಗ್ ಅವರು, ಟೆಂಡರ್ ಪ್ರಕ್ರಿಯೆಗಳಲ್ಲಿ ಶೇ 1ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಕ್ರಮ ಕೈಗೊಂಡಿದ್ದ ಪಂಜಾಬ್ ಸರ್ಕಾರ, ಸಚಿವರನ್ನು ವಜಾ ಮಾಡಿ ಬಂಧಿಸಿತ್ತು.

ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಅಂತಹ ಪ್ರಕರಣ ಕಂಡುಬಂದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಪಂಜಾಬ್ ಸಿಎಂ ಭಗವಂತ ಮಾನ್ ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT