ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು

ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಯ ಕಲಾಪಕ್ಕೆ ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ಸಿಂಗ್‌ ತಿಳಿಸಿದ್ದಾರೆ.

ಸಂಜಯ್ ಸಿಂಗ್ ಅವರು, ಸಭಾಧ್ಯಕ್ಷರ ಮೇಜಿಗೆ ಕಾಗದ ಎಸೆದು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪ ಸಭಾಪತಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಮಂಗಳವಾರದಂದು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕೆ ವಿರೋಧ ಪಕ್ಷಗಳ ಒಟ್ಟು 19 ಸಂಸದರನ್ನು ರಾಜ್ಯಸಭೆಯಿಂದ ಒಂದು ವಾರದ ಅವಧಿಗೆ ಅಮಾನತುಗೊಳಿಸಲಾಗಿತ್ತು.

ತೃಣಮೂಲ ಕಾಂಗ್ರೆಸ್‌ನ ಏಳು, ಡಿಎಂಕೆಯ ಆರು, ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ಮೂವರು, ಸಿಪಿಐಎಂನ ಇಬ್ಬರು ಹಾಗೂ ಸಿಪಿಐನ ಒಬ್ಬ ಸಂಸದರನ್ನು ಅಮಾನತುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT