ಮಂಗಳವಾರ, ಆಗಸ್ಟ್ 16, 2022
22 °C

ಅಮಿತ್‌ ಶಾ ನಿವಾಸದ ಎದುರು ಧರಣಿಗೆ ಯೋಜನೆ: ಎಎಪಿ ನಾಯಕರ ಮೇಲೆ ಹಲ್ಲೆ, ಬಂಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿವಾಸದ ಎದುರು ಧರಣಿಗೆ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷದ ನಾಯಕ ರಾಘವ್‌ ಛಡ್ಡಾ, ಅತಿಶಿ ಸೇರಿದಂತೆ ಹಲವು ನಾಯಕರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ದೆಹಲಿ ಜಲ ಮಂಡಳಿ ಉಪಾಧ್ಯಕ್ಷರೂ ಆಗಿರುವ ಛಡ್ಡಾ ಅವರನ್ನು ರಾಜೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆಂದು ಎಎಪಿ ತಿಳಿಸಿದೆ.

ಇದೇ ವೇಳೆ ಅಮಿತ್‌ ಶಾ ನಿವಾಸದ ಎದುರು ಪ್ರತಿಭಟನೆಗೆ ಮುಂದಾದ ಎಎಪಿ ನಾಯಕಿ ಅತಿಶಿ ಅವರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಎಎಪಿ ವಿಡಿಯೊ ಟ್ವೀಟ್‌ ಮಾಡಿದೆ.

 

ಇನ್ನುಳಿದ ಎಎಪಿ ಮುಖಂಡರಾದ ಸಂಜೀವ್‌ ಝಾ, ರೀತುರಾಜ್‌ ಗೋವಿಂದ್‌ ಮತ್ತು ಕುಲದೀಪ್‌ ಕುಮಾರ್‌ ಅವರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

 

 

ದೆಹಲಿ ಮಹಾನಗರ ಪಾಲಿಕೆಯಲ್ಲಿ ₹2,400 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಿವಾಸದ ಎದುರು ಧರಣಿ ನಡೆಸುವುದಾಗಿ ಆಮ್‌ ಆದ್ಮಿ ಪಕ್ಷ ಶನಿವಾರ ತಿಳಿಸಿತ್ತು.

 

ಬಿಜೆಪಿ ಆಡಳಿತವಿರುವ ಪುರಸಭೆ ನಿಗಮಗಳ ನಾಯಕರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಹೊರಗೆ ಧರಣಿ ಕುಳಿತಿರುವ ಸಮಯದಲ್ಲೇ ಎಎಪಿ ಈ ನಿರ್ಧಾರ ಕೈಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು