ಚಂಡೀಗಡ: ಲಂಚ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್‌ನ ಭಟಿಂಡಾ ಗ್ರಾಮಾಂತರ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಿತ್ ರತನ್ ಕೋಟ್‌ಫಟ್ಟಾ ಅವರನ್ನು ಬಂಧಿಸಲಾಗಿದೆ.
₹4 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಅಮಿತ್ ರತನ್ ಅವರನ್ನು ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಭಟಿಂಡಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
2022ರ ಮೇ 24ರಂದು ಲಂಚದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಸಂಪುಟದಿಂದ ವಜಾಗೊಳಿಸಿದ್ದರು.
ಆರೋಗ್ಯ ಇಲಾಖೆಯ ಟೆಂಡರ್‌ಗಳು ಮತ್ತು ಖರೀದಿ ಪ್ರಕ್ರಿಯೆಗಳಲ್ಲಿ ಶೇ 1ರಷ್ಟು ಕಮಿಷನ್‌ಗೆ ಸಚಿವರು ಬೇಡಿಕೆಯಿಟ್ಟಿದ್ದರು ಎನ್ನುವ ಆರೋಪ ಕೇಳಿಬಂದ ತಕ್ಷಣವೇ ಮಾನ್ ಅವರು ತಮ್ಮ ಸಹೋದ್ಯೋಗಿಯನ್ನು ಸಂಪುಟದಿಂದ ಕೈಬಿಟ್ಟಿದ್ದರು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದರು.
ಗುತ್ತಿಗೆದಾರರಿಂದ ಹಣ ಸುಲಿಗೆ ಮಾಡುವ ಸಂಚು ರೂಪಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿ ಪಂಜಾಬ್‌ನ ತೋಟಗಾರಿಕೆ ಮತ್ತು ಆಹಾರ ಸಂಸ್ಕರಣೆ ಸಚಿವ ಫೌಜಾ ಸಿಂಗ್ ಸರಾರಿ ಅವರು ಜ.7ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.