ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಈಗಲೇ ಹೋಗಲ್ಲ: ಗುಜರಾತ್ ಎಎಪಿ ಶಾಸಕ

Last Updated 11 ಡಿಸೆಂಬರ್ 2022, 20:03 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಆಯ್ಕೆಯಾಗಿರುವ ಶಾಸಕ ಭೂಪತ್ ಭಯಾನಿ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಇದನ್ನು ನಿರಾಕರಿಸಿರುವ ಭಯಾನಿ, ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದ್ದಾರೆ.

‘ಪ್ರಧಾನಿ ಮೋದಿ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಆದರೆ, ಎಎಪಿ ಜತೆ ನನಗೆ ಯಾವುದೇ ಅತೃಪ್ತಿ ಇಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ನಾನು ತೆಗೆದುಕೊಂಡಿಲ್ಲ. ನನ್ನ ಜನರು ಹಾಗೂ ಬೆಂಬಲಿಗರನ್ನು ಭೇಟಿ ಮಾಡಿದ ಬಳಿಕವಷ್ಟೇ ನಿರ್ಧಾರ
ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ನಾನು ಎಎಪಿಯಲ್ಲೇ ಇದ್ದೇನೆ’ ಎಂದು ಭೂಪತ್ ಭಯಾನಿ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT