ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ತೆರವು ಕಾರ್ಯಾಚರಣೆಗೆ ಅಡ್ಡಿ ಆರೋಪ, ಎಎಪಿ ಶಾಸಕ ಬಂಧನ

Last Updated 18 ಮೇ 2022, 11:20 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೆಹಲಿ ಅಭಿವೃದ್ಧಿ ಪ್ರಾಧಿಕಾರ(ಡಿಡಿಎ) ನಡೆಸುತ್ತಿರುವ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಆಮ್‌ ಆದ್ಮಿ ಪಾರ್ಟಿ(ಎಎಪಿ) ಶಾಸಕ ಕುಲದೀಪ್‌ ಕುಮಾರ್‌ ಅವರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣಪುರದ ಕಿಚಡಿಪುರ ಪ್ರದೇಶದಲ್ಲಿ ಆರಂಭವಾದ ತೆರವು ಕಾರ್ಯಾಚರಣೆ ವಿರೋಧಿಸಿ ಕುಂಡ್ಲಿ(ಪೂರ್ಷ) ಕ್ಷೇತ್ರದ ಶಾಸಕ ಕುಲದೀಪ್‌ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಡಿಡಿಎಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಅಕ್ರಮ ಕಟ್ಟಡ ತೆರವಿಗೆ ಯಾವುದೇ ಅಡ್ಡಿ ಆಗದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಕಳೆದೊಂದು ತಿಂಗಳಿಂದ ದೆಹಲಿ ಸ್ಥಳೀಯ ಆಡಳಿತಗಳು ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಿರಂತರವಾಗಿ ನಡಸುತ್ತಿವೆ. ಶಾಹಿನ್‌ಬಾಗ್‌, ಜಹಂಗೀರ್‌ಪುರಿ, ಮದಂಪುರ, ಖಾದರ್‌, ನ್ಯೂ ಫ್ರೆಂಡ್ಸ್‌ ಕಾಲೊನಿ, ಮಂಗೋಲ್ಪುರಿ, ರೊಹಿಣಿ, ಗೋಕ್ಲುಪುರಿ, ಲೋಧಿ ಕಾಲೊನಿ, ರಿಥಲಾ, ಜನಕಪುರಿ, ಹರಿ ನಗರ ಮತ್ತು ಖ್ಯಾಲ ಸೇರಿ ಹಲವು ಪ್ರದೇಶಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT