ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಕಚೇರಿ ಬಳಿ ಪ್ರತಿಭಟನೆ: ಎಎಪಿ ಸಂಸದ ಸಂಜಯ್ ಸಿಂಗ್, ಅನೇಕರು ಪೊಲೀಸ್ ವಶಕ್ಕೆ

Last Updated 26 ಫೆಬ್ರವರಿ 2023, 9:56 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ.

ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ಖಂಡಿಸಿ ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಸಂಸದ ಸಂಜಯ್ ಸಿಂಗ್, ದೆಹಲಿ ಸಚಿವ ಗೋಪಾಲ್ ರೈ ಸೇರಿದಂತೆ 50ಕ್ಕೂ ಹೆಚ್ಚು ಎಎಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮುನ್ನೆಚ್ಚರಿಕೆ ಕ್ರಮವಾಗಿ ಲೋಧಿ ರಸ್ತೆಯಲ್ಲಿರುವ ಸಿಬಿಐ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಿಬಿಐ ಕಚೇರಿ ಬಳಿ ಸೆಕ್ಷನ್ 144 ಜಾರಿ ಮಾಡಿರುವುದರಿಂದ ಪ್ರತಿಭಟನಾ ನಿರತರನ್ನು ಜಾಗ ತೊರೆಯುವಂತೆ ಮನವಿ ಮಾಡಲಾಗಿತ್ತು. ಆದರೆ, ಅವರು ರಸ್ತೆಯಲ್ಲೇ ಕುಳಿತು ಘೋಷಣೆಗಳನ್ನು ಕೂಗಿದರು. ಬಳಿಕ ಹಲವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸುವ ಸಾಧ್ಯತೆಗಳಿಗೆ ಎಂದು ಸಿಬಿಐನ ಉನ್ನತ ಮೂಲಗಳು ತಿಳಿಸಿವೆ.

ಮನೀಶ್ ಸಿಸೋಡಿಯಾ ಅವರ ನಿವಾಸ ಹಾಗೂ ಸಿಬಿಐ ಕಚೇರಿ ಸುತ್ತ ಭಾರೀ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT