ಸೋಮವಾರ, ಜೂನ್ 14, 2021
22 °C

ಮೋದಿ ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರ ಅಂಟಿಸಿದ್ದನ್ನು ಸಮರ್ಥಿಸಿಕೊಂಡ ಎಎಪಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ.

ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು.

ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, 'ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ' ಎಂದು ಎಎಪಿ ಹೇಳಿದೆ.

'ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ' ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ.

ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು