ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಲಿದೆ ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಶನಿವಾರ ಪಕ್ಷದ ರಾಜಕೀಯ ಸಲಹಾ ಸಮಿತಿ (ಪಿಎಸಿ) ಸಭೆಯ ನಂತರ ಘೋಷಿಸಿದರು.

ದೇಶದ ಉನ್ನತ ಸಾಂವಿಧಾನಿಕ ಹುದ್ದೆಯ ಚುನಾವಣೆಗೆ ಯಶವಂತ ಸಿನ್ಹಾ ಅವರು ಎನ್‌ಡಿಎಯೇತರ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಸ್ಪರ್ಧಿಸಿದ್ದಾರೆ.

‘ಎಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ನಾವು ಗೌರವಿಸುತ್ತೇವೆ. ಆದರೆ, ಎಎಪಿಯು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಲಿದೆ’ ಎಂದು ಸಿಂಗ್ ಹೇಳಿದರು.

ಸಭೆಯಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಪಂಜಾಬ್ ಸಂಸದ ರಾಘವ್ ಚಡ್ಡಾ, ಶಾಸಕಿ ಅತಿಶಿ ಮತ್ತು ಪಿಎಸಿಯ ಇತರ ಸದಸ್ಯರು ಭಾಗವಹಿಸಿದ್ದರು.

ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮತದಾನ ನಡೆಯಲಿದೆ. 21ರಂದು ಫಲಿತಾಂಶ ಹೊರಬೀಳಲಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ಯಾವುದೇ ಸಖ್ಯವಿಲ್ಲದ ಎಎಪಿ, ದೆಹಲಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿದೆ.

ದೆಹಲಿಯ ಮೂವರು ಸೇರಿದಂತೆ ಎರಡು ರಾಜ್ಯಗಳಿಂದ 10 ರಾಜ್ಯಸಭಾ ಸದಸ್ಯರು ಎಎಪಿ ಹೊಂದಿದೆ.

ಅಲ್ಲದೆ, ಪಕ್ಷವು ಪಂಜಾಬ್‌ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಸೇರಿದಂತೆ ಒಟ್ಟು 156 ಶಾಸಕರನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.