ಸೋಮವಾರ, ಮಾರ್ಚ್ 20, 2023
24 °C

ನಾಗಾಲ್ಯಾಂಡ್‌ನಲ್ಲಿ ಎಎಪಿ ಸ್ಪರ್ಧೆ: ಮೈತ್ರಿ ಇಲ್ಲ –ರಾಜೇಶ್ ಶರ್ಮಾ

ಪ್ರಜಾವಾಣಿ ವೆಬ್‌ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊಹಿಮಾ: ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಇಲ್ಲಿನ ಯಾವುದೇ ಪಕ್ಷಗಳ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಶಾನ್ಯ ರಾಜ್ಯಗಳ ಉಸ್ತುವಾರಿ ರಾಜೇಶ್ ಶರ್ಮಾ ಹೇಳಿದ್ದಾರೆ.

ನಾವು ಸಾಧ್ಯವಾದಷ್ಟು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಆದರೆ ಯಾವುದೇ ಪಕ್ಷದ ಜೊತೆ ಚುನಾವಣಾ ಪೂರ್ವ ಮೈತ್ರಿ ಇರುವುದಿಲ್ಲ ಎಂದು ಅವರು ಹೇಳಿದರು.

ಮಾಜಿ ಶಾಸಕ ಆಸು ಕೀಹೋ ಎಎಪಿಯ ನಾಗಾಲ್ಯಾಂಡ್ ಘಟಕದ ಅಧ್ಯಕ್ಷರಾಗಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಚುನಾವಣೆ ಎದುರಿಸಲಿಸದೆ ಎಂದು ಹೇಳಿದರು. ಉತ್ತಮ ಆಡಳಿತ, ಪ್ರಾಮಾಣಿಕ ರಾಜಕೀಯ ಮತ್ತು ಭ್ರಷ್ಟಾಚಾರ ನಿರ್ಮೂಲನೆಯನ್ನು ಬಯಸಿರುವ ರಾಜ್ಯದ ಜನರು ಎಎಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.  ರಾಜ್ಯದ ಒಟ್ಟಾರೆ ಅಭಿವೃದ್ಧಿಗಾಗಿ ನಾಗಾಲ್ಯಾಂಡ್ ಜನರು ಮತ ಚಲಾಯಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿರುವ ನಾಗಾಗಳು ಈಗಾಗಲೇ ಎಎಪಿಯನ್ನು ಬೆಂಬಲಿಸಿದ್ದಾರೆ. ರಾಜ್ಯದಲ್ಲೂ ಕೂಡ ಬೆಂಬಲಿಸುವ ವಿಶ್ವಾಸವಿದೆ. ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಎಎಪಿ ಸ್ಪರ್ಧೆ ಅಗತ್ಯವಾದ ಬದಲಾವಣೆ ತರಲಿದೆ ಎಂದು ಆಸು ಕೀಹೋ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು