ನವದೆಹಲಿ: ಮಾರ್ಚ್ 30ರಂದು ದೇಶದಾದ್ಯಂತ 11 ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರೈ ಮಂಗಳವಾರ ತಿಳಿಸಿದ್ದಾರೆ.
‘ಮಾರ್ಚ್ 30 ರಂದು ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಎಎಪಿ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ. ಪಕ್ಷದ ಎಲ್ಲಾ ರಾಜ್ಯ ಘಟಕಗಳಿಗೆ ಪೋಸ್ಟರ್‌ಗಳನ್ನು ಅಂಟಿಸಲು ತಿಳಿಸಲಾಗಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ’ ಎಂದು ರೈ ತಿಳಿಸಿದ್ದಾರೆ.
ಕಳೆದ ವಾರ, ದೆಹಲಿಯಾದ್ಯಂತ ಗೋಡೆಗಳು ಮತ್ತು ವಿದ್ಯುತ್ ಕಂಬಗಳ ಮೇಲೆ ‘ಮೋದಿ ಹಟಾವೋ, ದೇಶ್ ಬಚಾವೋ’ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ) ಎಂಬ ಪೋಸ್ಟರ್‌ಗಳನ್ನು ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಕೇಜ್ರಿವಾಲ್ ಹಠಾವೋ, ದೆಹಲಿ ಬಚಾವೋ’ (ಕೇಜ್ರಿವಾಲ್ ತೊಲಗಿಸಿ, ದೆಹಲಿಯನ್ನು ಉಳಿಸಿ) ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಎಎಪಿಗೆ ಬಿಜೆಪಿ ತಿರುಗೇಟು ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.