ಬುಧವಾರ, ಅಕ್ಟೋಬರ್ 20, 2021
24 °C

ಅಯೋಧ್ಯೆ, ಲಖನೌದಲ್ಲಿ ಎಎಪಿ ತಿರಂಗಾ ಯಾತ್ರೆ

PTI Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಆಮ್‌ ಆದ್ಮಿ ಪಕ್ಷವು (ಎಎಪಿ) ಭಾರತದ 75ನೇ ವರ್ಷದ ಸಾತಂತ್ರ್ಯೋತ್ಸವ ಪ್ರಯುಕ್ತ ಅಯೋಧ್ಯೆ, ಲಖನೌ ಮತ್ತು ನೋಯಿಡಾದಲ್ಲಿ ‘ತಿರಂಗಾ ಯಾತ್ರೆಗಳನ್ನು’ ಕೈಗೊಳ್ಳಲಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಸೆಪ್ಟೆಂಬರ್‌ ಮಧ್ಯಭಾಗದಲ್ಲಿ ಯಾತ್ರೆ ತೆರಳಲಿದೆ. ನೋಯಿಡಾದಲ್ಲಿ ಸೆ.1ರಂದು ಯಾತ್ರೆ ನಡೆಯಲಿದೆ ಎಂದು ಪಕ್ಷದ ನಾಯಕ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ.

ಈ ಯಾತ್ರೆಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಭಾಗವಹಿಸುವರು. ಭ್ರಷ್ಟಾಚಾರ ಮತ್ತು ಜಾತೀಯತೆಯಿಂದ ಕೂಡಿದ ರಾಜಕೀಯದ ವಿರುದ್ಧ ಜನರನ್ನು ಒಗ್ಗೂಡಿಸುವುದು ಯಾತ್ರೆಯ ಉದ್ದೇಶ ಎಂದು ವಿವರಿಸಿದ್ದಾರೆ.

ಎಎಪಿಯು ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು