ಶನಿವಾರ, ಜುಲೈ 24, 2021
27 °C

ಗೋವಾದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ಕೇಜ್ರಿವಾಲ್

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಮತ ನೀಡಿ ಅಧಿಕಾರಕ್ಕೆ ತಂದರೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ.

‘ನಮಗೆ ಅಧಿಕಾರ ನೀಡಿದರೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುತ್ತೇವೆ.’ಎಂದು ಕೇಜ್ರಿವಾಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ದೆಹಲಿಯ ಜನರು ಉಚಿತ ವಿದ್ಯುತ್ ಪಡೆಯಲು ಸಾಧ್ಯವಾದರೆ, ಗೋವಾದ ಜನರಿಗೆ ಏಕೆ ಉಚಿತ ವಿದ್ಯುತ್ ನೀಡಬಾರದು’ಎಂದು ಅವರು ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಕೆಲ ನಾಯಕರು ಪಕ್ಷ ತೊರೆದು ಬಿಜೆಪಿ ಸೇರಿದ್ದರ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು. ಸಂಖ್ಯೆಗಳ ಪ್ರಕಾರ, ಪ್ರತಿಪಕ್ಷದಲ್ಲಿ ಇರಬೇಕಾದವರು ಈಗ ರಾಜ್ಯವನ್ನು ಆಳುತ್ತಿದ್ದಾರೆ ಮತ್ತು ಅಧಿಕಾರದಲ್ಲಿರಬೇಕಾದವರು ಈಗ ಪ್ರತಿಪಕ್ಷದಲ್ಲಿದ್ದಾರೆ ಎಂದು ಅವರು ಹೇಳಿದರು

‘ಪಕ್ಷ ಬದಲಿಸಿದ ಈ ಶಾಸಕರು ಜನರ ಕೆಲಸವನ್ನು ಪೂರ್ಣಗೊಳಿಸಲು ತಾವು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿಕೊಂಡರು. ಆದರೆ, ಅವರು ಹೇಳಿಕೊಂಡಂತೆ ಜನರ ಕೆಲಸವನ್ನು ಮಾಡಿದ್ದಾರೆಯೇ? ಹಣದ ಆಮಿಷದಿಂದ ಪಕ್ಷ ಬದಲಾಯಿಸಿದ್ದಾರೆ ಎಂದು ಜನ ಹೇಳುತ್ತಿದ್ದಾರೆ. ನಮ್ಮ ನಾಯಕರು ನಮಗೆ ದ್ರೋಹ ಮಾಡಿದ್ದಾರೆಂದು ಜನರು ಭಾವಿಸಿದ್ದಾರೆ. ’ ಎಂದು ಅವರು ಹೇಳಿದರು.

‘ಗೋವಾ ಬದಲಾವಣೆ ಬಯಸಿದೆ. ಜನರು ಶುದ್ಧ ರಾಜಕೀಯವನ್ನು ಬಯಸುತ್ತಾರೆ, ’ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು