ರಾಮಮಂದಿರ: ಜಮೀನು ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ

ಲಖನೌ/ಅಯೋಧ್ಯಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಭಾನುವಾರ ಆರೋಪಿಸಿದ್ದಾರೆ.
‘₹ 2 ಕೋಟಿ ಬೆಲೆ ಬಾಳುವ ಈ ಜಮೀನನ್ನು ₹ 18.5 ಕೋಟಿಗೆ ಖರೀದಿಸಲಾಗಿದೆ’ ಎಂದು ಅವರು ಆರೋಪಿಸಿದ್ದಾರೆ. ಇದು ಅಕ್ರಮ ಹಣ ವರ್ಗಾವಣೆ ಪ್ರಕರಣದಂತಿದ್ದು, ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನಕಾರ್ಯದರ್ಶಿ ಚಂಪತ್ ರಾಯ್ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.