ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಲಸಿಕಾ ಅಭಿಯಾನ ತೀವ್ರಗೊಳಿಸಲು ಏಮ್ಸ್‌ ಸಲಹೆ

’ಎರಡು ಡೋಸ್‌ ಪಡೆದವರು ತೀವ್ರ ಸ್ವರೂಪದ ಸೋಂಕಿಗೆ ಒಳಗಾಗುವ ಅಪಾಯ ಕಡಿಮೆ’
Last Updated 31 ಆಗಸ್ಟ್ 2021, 21:40 IST
ಅಕ್ಷರ ಗಾತ್ರ

ನವದೆಹಲಿ: ಲಸಿಕೆಯ ಎರಡು ಡೋಸ್‌ಗಳನ್ನು ಪಡೆದವರು ಕೋವಿಡ್‌ನ ತೀವ್ರ ಸ್ವರೂಪದ ಸೋಂಕಿಗೆ ಒಳಗಾಗುವ ಅಪಾಯ ಕಡಿಮೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್‌) ತಂಡ ನಡೆಸಿರುವ ಅಧ್ಯಯನದಿಂದ ತಿಳಿದು ಬಂದಿದೆ.

ಹೀಗಾಗಿ, ಎಲ್ಲರಿಗೂ ಸಂಪೂರ್ಣ ಎರಡು ಡೋಸ್‌ಗಳನ್ನು ತ್ವರಿತಗತಿಯಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧ್ಯಯನ ತಂಡವು ಸಲಹೆ ನೀಡಿದೆ.

ಜನವರಿ 16ರಿಂದ ಲಸಿಕಾ ಅಭಿಯಾನ ಆರಂಭಿಸಿದ ಬಳಿಕ ಇದುವರೆಗೆ 65 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಇವರಲ್ಲಿ 50 ಕೋಟಿ ಮಂದಿ ಮೊದಲ ಡೋಸ್‌ ಪಡೆದಿದ್ದಾರೆ ಮತ್ತು ಕೇವಲ 15 ಕೋಟಿ ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ.

ಮಂಗಳವಾರ 2ನೇ ಬಾರಿ ಒಂದು ಕೋಟಿಗೂ ಹೆಚ್ಚು ಡೋಸ್‌ಗಳನ್ನು ನೀಡ ಲಾಗಿದೆ. 94.47 ಕೋಟಿ ವಯಸ್ಕರಲ್ಲಿ ಇದುವರೆಗೆ ಶೇಕಡ 53ರಷ್ಟು ಮೊದಲ ಡೋಸ್‌ ಹಾಗೂ ಶೇಕಡ 16ರಷ್ಟು ಮಾತ್ರ ಎರಡೂ ಡೋಸ್‌ ಪಡೆದಿದ್ದಾರೆ.

‘ಬೋಧಕ–ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಿ’
ಶಾಲೆಗಳಲ್ಲಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆಯಬೇಕು. ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಶಾಲೆಗಳು ಮರು ಆರಂಭವಾಗುತ್ತಿರುವುದರಿಂದ ತ್ವರಿತಗತಿಯಲ್ಲಿ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಮೊದಲ ಡೋಸ್‌ ಪಡೆದವರು ಎರಡನೇ ಡೋಸ್‌ ಪಡೆಯಬೇಕು ಎಂದು ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT