ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶದಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್‌ ರೋಗಿಗಳ ಸಾವು: ಪ್ರಿಯಾಂಕಾ

Last Updated 5 ಮೇ 2021, 10:44 IST
ಅಕ್ಷರ ಗಾತ್ರ

ನವದೆಹಲಿ:‘ಉತ್ತರ ಪ್ರದೇಶ ಸರ್ಕಾರವು ಆಮ್ಲಜನಕ ಕೊರತೆಯಿದೆ ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಅಲ್ಲಿ ಹಲವಾರು ರೋಗಿಗಳು ಆಮ್ಲಜನಕ ಕೊರತೆಯಿಂದಾಗಿಯೇ ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ ಎಂಬುದನ್ನು ಪತ್ತೆ ಹಚ್ಚಬೇಕು’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

‘ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಕೋವಿಡ್ ರೋಗಿಗಳು ಮೃತಪಟ್ಟರೆ, ಅದು ಕ್ರಿಮಿನಲ್‌ ಅಪರಾಧ’ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ‘ಅಲಹಾಬಾದ್‌ ಹೈಕೋರ್ಟ್‌ ಸರ್ಕಾರದ ಕಾರ್ಯವೈಖರಿಗೆ ಕನ್ನಡಿ ಹಿಡಿದಿದೆ. ಉತ್ತರ ಪ್ರದೇಶ ಸರ್ಕಾರ ನಿರಂತರವಾಗಿ ಆಮ್ಲಜನಕ ಕೊರತೆಯಿಲ್ಲ ಎಂದು ಹೇಳುತ್ತಾ ಬಂದಿದೆ. ಈ ಬಗ್ಗೆ ಯಾರಾದರೂ ಮಾತನಾಡಿದರೆ ಅವರನ್ನೂ ಬೆದರಿಸುತ್ತದೆ’ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT