ಶನಿವಾರ, ಸೆಪ್ಟೆಂಬರ್ 24, 2022
21 °C

ಸಂಶಯದ ಮೇಲೆ ಆರೋಪಿಗೆ ಶಿಕ್ಷೆ ಸಲ್ಲದು: ಸುಪ್ರೀಂ ಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಲವಾದ ಸಾಕ್ಷ್ಯಗಳಿಲ್ಲದೇ ಸಂಶಯದ ಆಧಾರದ ಮೇಲೆ ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಿ ಶಿಕ್ಷೆ ವಿಧಿಸಲಾಗದು ಎಂದು ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಪಿ.ಎಸ್‌. ನರಸಿಂಹ ಅವರಿದ್ದ ಪೀಠವು‌, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯ ತೀರ್ಪು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಕೊಲೆ ಪ್ರಕರಣದ ಆಪಾದನೆಯಿಂದ ಆತನನ್ನು ಖುಲಾಸೆಗೊಳಿಸಿತು.

‘ಆರೋಪಿ ವಿರುದ್ಧದ ಆಪಾದನೆ ನ್ಯಾಯಸಮ್ಮತವಾಗಿ ಸಾಬೀತಾಗದಿದ್ದರೆ ಆತ ನಿರಪರಾಧಿಯೆಂದೇ ಭಾವಿಸಬೇಕು’ ಎಂದು ಪೀಠ ಹೇಳಿದೆ. 

ವ್ಯಕ್ತಿಯ ಪರವಾಗಿ ವಕೀಲ ರಿಶಿ ಮಲ್ಹೋತ್ರಾ ವಾದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು