ಸೋಮವಾರ, ಆಗಸ್ಟ್ 8, 2022
23 °C

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಬೆಂಗಳೂರು ಡ್ರಗ್ಸ್‌ ಜಾಲ ಆರೋಪಿಗಳ ನೆರವು ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬೆಂಗಳೂರಿನ ಮಾದಕವಸ್ತು ಪ್ರಕರಣದ ಆರೋಪಿಗಳು ಕೂಡ ನೆರವು ನೀಡಿರುವ ಶಂಕೆ ಇದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳ ನ್ಯಾಯಾಂ‌ಗ ಬಂಧನವನ್ನು ವಿಸ್ತರಿಸುವಂತೆ ಪಿಎಂಎಲ್‌ಎ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ಬುಧವಾರ ಮನವಿ ಮಾಡಿದೆ.

ಮಾದಕವಸ್ತು ಪ್ರಕರಣದ ತನಿಖೆ ವೇಳೆ ಸರಿತ್‌ ಪಿ.ಎಸ್.‌, ಸ್ವಪ್ನ ಸುರೇಶ್‌ ಸೇರಿದಂತೆ ಮೂವರು ಆರೋಪಿಗಳಿಗೆ ಚಿನ್ನ ಕಳ್ಳ ಸಾಗಣೆ ಮಾಡಲು ಬೆಂಗಳೂರಿನ ಡ್ರಗ್ಸ್‌ ಜಾಲದ ಆರೋಪಿಗಳು ಸಹಾಯ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಮಾದಕ ವಸ್ತು ಪ್ರಕರಣದ ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಬೆಂಗಳೂರಿನ ಮಾದಕವಸ್ತು ನಿಯಂತ್ರಣ ಬ್ಯುರೋಗೆ ಇಡಿ ಮನವಿ ಮಾಡಿದೆ.

ಈ ಪ್ರಕರಣದಲ್ಲಿ ಸಂಬಂಧವಿದೆ ಎನ್ನಲಾಗುತ್ತಿರುವ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಚಿನ್ನ ಕಳ್ಳ ಸಾಗಣೆಯ ಪ್ರಮುಖ 20ಕ್ಕೂ ಹೆಚ್ಚು ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ಇಡಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು