ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡಗಳ ಧ್ವಂಸ: ಯೋಗಿ ಸರ್ಕಾರ 3 ದಿನಗಳಲ್ಲಿ ಪ್ರತಿಕ್ರಿಯಿಸಬೇಕು ಎಂದ 'ಸುಪ್ರೀಂ'

ಅಕ್ಷರ ಗಾತ್ರ

ನವದೆಹಲಿ: ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮನವಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಪ್ರವಾದಿ ಮಹಮ್ಮದ್‌ ನಿಂದನೆ ವಿರೋಧಿಸಿಉತ್ತರ ಪ್ರದೇಶದಲ್ಲಿ ಗಲಭೆ ನಡೆಸಿದವರಿಗೆ ಸೇರಿದ ಮನೆಗಳನ್ನು ಧ್ವಂಸಗೊಳಿಸುವ ಮೊದಲು ಉತ್ತರ ಪ್ರದೇಶ ಸರ್ಕಾರವು ನಿಯಮಗಳನ್ನು ಪಾಲಿಸಬೇಕು. ಜೊತೆಗೆ, ಕಾನೂನು ಬಾಹಿರವಾಗಿ ಕಟ್ಟಡ ನೆಲಸಮ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿಜಮೈತ್‌ ಉಲಾಮ–ಐ–ಹಿಂದ್‌ ಎಂಬ ಮುಸ್ಲಿಂ ಸಂಘಟನೆ ಅರ್ಜಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವುಪ್ರತಿಕ್ರಿಯೆ ದಾಖಲಿಸುವಂತೆ ಹಾಗೂ ಮೂರು ದಿನಗಳ ಒಳಗೆ ಅಫಿಡವಿಟ್‌ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಪ್ರಯಾಗರಾಜ್‌ನಲ್ಲಿ ನಡೆದ ಗಲಭೆಯ ಮುಖ್ಯ ಆರೋಪಿ, ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕ ಜಾವೇದ್‌ ಮೊಹಮ್ಮದ್‌ ಸೇರಿದಂತೆ, ಹಿಂಸಾಚಾರ ಪ್ರಕರಣದ ಹಲವು ಆರೋಪಿಗಳಿಗೆ ಸೇರಿರುವ ಅಕ್ರಮಕಟ್ಟಡಗಳನ್ನು ನೆಲಸಮ ಮಾಡುವಂತೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶ ನೀಡಿದ್ದರು. ಅದರಂತೆ ಸ್ಥಳೀಯ ಆಡಳಿತಗಳು ಬುಲ್ಡೋಜರ್ ಬಳಿಸಿ ಆರೋಪಿಗಳ ಮನೆಗಳನ್ನು ನೆಲಸಮ ಮಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT