ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ರಿಯ ಕೋವಿಡ್‌ ಕೇಸ್‌ 15419ಕ್ಕೆ ಇಳಿಕೆ

2,364 ಹೊಸ ಕೇಸ್‌ ಪತ್ತೆ, 10 ಮಂದಿ ಸೋಂಕಿಗೆ ಬಲಿ
Last Updated 19 ಮೇ 2022, 13:20 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ 2,364 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಒಬ್ಬರು ಸೇರಿದಂತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

‌ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಕ್ಯೆ 5,24,303ಕ್ಕೆ ತಲುಪಿದೆ.ಹೊಸ ಸೋಂಕಿತರೂ ಸೇರಿ ಸಕ್ರಿಯ ಸೋಂಕಿನ ಪ್ರಮಾಣ 15,419ಕ್ಕೆ ಇಳಿಕೆಯಾಗಿದೆ.

ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.50ರಷ್ಟಿದೆ. ಒಟ್ಟು ಸೋಂಕಿತರ ಪೈಕಿ 4,25,89,841 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮಧ್ಯೆ ದೇಶದಾದ್ಯಂತ 191.79 ಕೋಟಿ ಡೋಸ್‌ ಕೋವಿಡ್‌ ಲಸಿಕೆ ಹಾಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT